Connect with us

LATEST NEWS

ದರ್ಬೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತ- ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

ಪುತ್ತೂರು ನವೆಂಬರ್ 3: ಪುತ್ತೂರಿನ ದರ್ಬೆ ಬೈಪಾಸ್ ನಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದ್ದು, ಮತ್ತೊರ್ವ ಬಾಲಕಿ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ನಿನ್ನೆ ಮಧ್ಯಾಹ್ನ ಈ ಅಪಘಾತದ ಸಂಭವಿಸಿದ್ದು ಥಾಮಸ್‌ ಎಂಬವರು ಮಂಗಳೂರಿನಿಂದ ಸುಳ್ಯದತ್ತ ಕಾರು ಚಲಾಯಿಸುತ್ತಿದ್ದ ಕಾರು ದರ್ಬೆ ಬೈಪಾಸ್‌ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರಿಗೆ ಡಿಕ್ಕಿ ಹೊಡೆದಿದ್ದು, ನಂತರ ಮುಂಭಾಗದಲ್ಲಿ ನಿಂತಿದ್ದ ಸವಣೂರಿನ ಉಬೈದ್‌ ಅವರ ಕಾರಿಗೆ ಡಿಕ್ಕಿ ಹೊಡೆದು ನಿಂತಿದೆ. ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಈ ಘಟನೆಯಲ್ಲಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಈರ್ವರು ಮಕ್ಕಳು, ಮತ್ತು ಓರ್ವ ಮಹಿಳೆಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಬಾಲಕಿಯೊರ್ವಳು ಮೃತಪಟ್ಟಿದ್ದು, ಇನ್ನೋರ್ವ ಬಾಲಕಿ ಮತ್ತು ಮಹಿಳೆ ಗಂಭೀರ ಗಾಯಗೊಂಡಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ದರ್ಬೆ ನಿವಾಸಿ ಗೀತಾ ರವರೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Facebook Comments

comments