Connect with us

    DAKSHINA KANNADA

    ಪುತ್ತೂರಿನ ಆದರ್ಶ ವಿವಿಧೋದ್ಧೇಶ ಸಹಕಾರ ಸಂಘ ವಿದ್ಯಾನಿಧಿ-ಸಹಾಯಧನ ವಿತರಣಾ ಸಮಾರಂಭ

    ಪುತ್ತೂರು ಅಗಸ್ಟ್ 28:  ಆದರ್ಶ ವಿವಿದೋದ್ಧೇಶ ಸಹಕಾರ ಸಂಘದ ವತಿಯಿಂದ ಸಂಘದ ಶಾಖಾ ವ್ಯಾಪ್ತಿಗೆ ಒಳಪಟ್ಟ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ಸರ್ಕಾರಿ ಶಾಲೆಗಳ 8ನೇ ಮತ್ತು 9ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಶನಿವಾರ ನಗರದ ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಸಹಕಾರ ಸಂಘಗಳ ಪುತ್ತೂರು ವಿಭಾಗದ ಸಹಾಯಕ ನಿಬಂಧಕ ಯಸ್.ಎಂ. ರಘು ಅವರು ಮಾತನಾಡಿ ಅದರ್ಶ ವಿವಿಧೋದ್ಧೇಶ ಸಹಕಾರ ಸಂಘವು ಸರ್ಕಾರಿ ಶಾಲಾ ಮಕ್ಕಳಿಗೆ ಸಹಾಯಧನ ನೀಡುವ ಮೂಲಕ ಸಹಕಾರಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಜಿಲ್ಲೆಯ ಸಹಕಾರದ ಸಂಪ್ರದಾಯಕ್ಕೆ ಇದೊಂದು ಸೀತಾರಾಮ ರೈಗಳು ತಮ್ಮದೇ ರೀತಿಯ ಕೊಡುಗೆಯನ್ನು ನೀಡಿದ್ದಾರೆ ಎಂದರು.

    ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಾಡಿ ಮಾತನಾಡಿದ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರತ್ನಕುಮಾರಿ ಅವರು ಮಾತನಾಡಿ ಆದರ್ಶ ವಿವಿಧೋದ್ಧೇಶ ಸಹಕಾರ ಸಂಘವು ತನ್ನ ಹೆಸರಿಗೆ ತಕ್ಕಂತೆ ಆದರ್ಶವನ್ನು ಮೆರೆದಿದೆ. ಸರ್ಕಾರಿ ಶಾಲಾ ಸಾಧಕ ವಿದ್ಯಾರ್ಥಿಗಳಿಗೆ ಸಹಾಯಧನ ನೀಡುತ್ತಿರುವುದು ಸಂಘದ ಸಾಮಾಜಿಕ ಕಳಕಳಿಗೆ ನಿದರ್ಶವಾಗಿದೆ. ಇಂತಹ ಸಹಕಾರವು ವಿದ್ಯಾರ್ಥಿಗಳು ಕಲಿಕಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಹಾಗೂ ಕಲಿಕಾ ಆಸಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದರು. ಸಂಘದ ಅಧ್ಯಕ್ಷ ಸಹಕಾರ ರತ್ನ ಕೆ. ಸೀತಾರಾಮ ರೈ ಸವಣೂರು ಪ್ರಾಸ್ತಾವಿಕ ಮಾತನಾಡಿದರು.

    ಈ ಸಂದರ್ಭದಲ್ಲಿ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ೨೫೦ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಲಾ ರೂ. ೨ ಸಾವಿರದಂತೆ ಒಟ್ಟು ರೂ. ೫ ಲಕ್ಷ ಸಹಾಯಧನ ವಿತರಿಸಲಾಯಿತು.

    ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿಭಾಗದದಲ್ಲಿ ೬೨೫ರಲ್ಲಿ ೬೧೯ ಅಂಕ ಪಡೆದು ದ.ಕ.ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಕಲ್ಮಂಜ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ತನುಶ್ರೀ ಅವರಿಗೆ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    ವೇದಿಕೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ,,ಸಂಘದ ಅಧ್ಯಕ್ಷ ಸಹಕಾರ ರತ್ನ ಕೆ. ಸೀತಾರಾಮ ರೈ ಸವಣೂರು,ಉಪಾಧ್ಯಕ್ಷ ಎನ್. ಸುಂದರ ರೈ ಸವಣೂರು ಸಂಘದ ಮಹಾಪ್ರಬಂಧಕ ವಸಂತ ಜಾಲಾಡಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು

    Share Information
    Advertisement
    Click to comment

    You must be logged in to post a comment Login

    Leave a Reply