ಪುತ್ತೂರು ನವೆಂಬರ್ 18: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಾಬ್ದಿ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಅಟಲ್ ವಿರಾಸತ್ ನಾಳೆ ಪುತ್ತೂರಿನಲ್ಲಿ ನಡೆಯಲಿದ್ದು, ಈಗಾಗಲೇ ಸಿದ್ದತೆ ಪೂರ್ಣಗೊಂಡಿದೆ.

ನಾಳೆ ನವೆಂಬರ್ 19ರಂದು ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ಅತಿಥಿ, ಗಣ್ಯರ ಜತೆ ಸಾವಿರಾರು ಕಾರ್ಯಕರ್ತರ ಮೆರವಣಿಗೆ ನಡೆಯಲಿದೆ. ಶ್ರೀಲಕ್ಷಿ ವೆಂಕಟರಮಣ ದೇವಳದ ಬಳಿ ಇರುವ ಮೈದಾನದಲ್ಲಿಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಭಾಗವಹಿಸಲು ಪುತ್ತೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮಿಸಲಿದ್ದಾರೆ.

ಅಟಲ್ ವಿರಾಸತ್ ಮೂಲಕ ರಾಜ್ಯಾಧ್ಯಂತ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಿಜೆಪಿ ನಿರ್ಧರಿಸಿದ್ದರು. ಸಮಾವೇಶದಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಯ ಸಂಸದರು ಹಾಗೂ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. ಅಟಲ್ ಗುಣಗಾನದ ಜೊತೆಗೆ ಪುತ್ತೂರಿನಲ್ಲಿ ಬಿಜೆಪಿಯ ಶಕ್ತಿ ಪ್ರದರ್ಶನ ಮಾಡಲಿದೆ.



