ಪುತ್ತೂರು ನವೆಂಬರ್ 17: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 100 ನೇ ವರ್ಷದ ಜನ್ಮಶತಾಬ್ದಿ ಹಿನ್ನಲೆಯಲ್ಲಿ ನವೆಂಬರ್ 19 ರಂದು ಪುತ್ತೂರಿನಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕಿಶೋರ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 100 ನೇ ವರ್ಷದ ಜನ್ಮಶತಾಬ್ದಿ ಹಿನ್ನಲೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಈ ಹಿಂದೆ ಪುತ್ತೂರಿಗೆ ಬಂದು ಭಾಷಣ ಮಾಡಿದ ಜಾಗದಲ್ಲೇ ಅಟಲ್ ವಿರಾಸತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗಿಯಾಗಲಿದ್ದು, ಈ ವೇಳೆ ಅಟಲ್ ಜೊತೆಗಿದ್ದ ಜಿಲ್ಲೆಯ ಹಿರಿಯ ನಾಯಕರಿಗೂ ಗೌರವ ಸಲ್ಲಿಸಲಾಗುವುದು ಎಂದರು.



