DAKSHINA KANNADA
ಪುತ್ತೂರು: ಭಕ್ತಕೋಡಿ ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಎಸ್ .ಡಿ ವಿಷ ಸೇವಿಸಿ ಆ*ತ್ಮಹ*ತ್ಯೆ

ಪುತ್ತೂರು ಮಾರ್ಚ್ 25: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ, ಸರ್ವೆ ಗ್ರಾಮದ ಸರ್ವೆದೋಳಗುತ್ತು ಅಲೆಕ್ಕಿ ನಿವಾಸಿ, ರಾಜೇಶ್ ಎಸ್.ಡಿ. (43) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾರ್ಚ್ 22ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ವಿಷ ಪದಾರ್ಥ ಸೇವಿಸಿದ್ದು ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಜೀವನ್ಮರಣ ಹೋರಾಟ ನಡೆಸಿದ ಅವರು ಮಾರ್ಚ್ 24ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ಮದುವೆಯಾಗಿ 15 ದಿನಕ್ಕೆ ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ ಹೆಂಡತಿ
ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು. ಸರ್ವೆ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದಹಾಗೂ ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದ ಅವರು ವೃತ್ತಿಯಲ್ಲಿ ಎಲೆಕ್ನಿಷಿಯನ್ ಆಗಿದ್ದರು. ಮೃತರು ತಾಯಿ, ಸಹೋದರಿ, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.