ಪುತ್ತೂರು ಎಪ್ರಿಲ್ 27 : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ನಾರಿಶಕ್ತಿ ಅಧಿನಿಯಮ’ಕ್ಕೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ವಿರೋಧ ವ್ಯಕ್ತಪಡಿಸಿರುವುದನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡೆ ವಿದ್ಯಾಗೌರಿ, “ದೇಶದ ಶೇ. 50ರಷ್ಟಿರುವ ಮಹಿಳಾ ಶಕ್ತಿಯನ್ನು ಕಾಂಗ್ರೆಸ್ ಮಿತ್ರಪಕ್ಷಗಳು ಪ್ರಶ್ನೆ ಮಾಡಿವೆ. ಮಹಿಳೆಯರು ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಮುನ್ನೆಲೆಗೆ ಬರುವುದು ಕಾಂಗ್ರೆಸ್ಗೆ ಇಷ್ಟವಿಲ್ಲ. ಮಹಿಳೆಯರ ಪರವಾಗಿ ನಿಲ್ಲದ ಕಾಂಗ್ರೆಸ್ ನಾಯಕಿಯರ ನಿಲುವು ಅವರ ಅವಸಾನಕ್ಕೆ ನಾಂದಿ ಹಾಡಲಿದೆ,” ಎಂದು ಟೀಕಿಸಿದರು.
ಕಾಂಗ್ರೆಸ್ನ ಮಹಿಳಾ ಮಣಿಗಳೇ ಈ ಅಧಿನಿಯಮವನ್ನು ವಿರೋಧಿಸುತ್ತಿರುವುದು ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.