DAKSHINA KANNADA
ಪುತ್ತೂರು – ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು ಮೂವರ ದುರ್ಮರಣ

ಪುತ್ತೂರು ಡಿಸೆಂಬರ್ 28: ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ನಡೆದಿದ್ದು, ನಿದ್ರೆ ಮಂಪರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದು ಮೂವರು ಸಾವನಪ್ಪಿದ ಘಟನೆ ಪುತ್ತೂರಿನ ಪರ್ಲಡ್ಕದಲ್ಲಿ ಮುಂಜಾನೆ ನಡೆದಿದೆ.
ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ ಮತ್ತು ರಮೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಗೋಂದೊಳ್ ಪೂಜೆಗೆ ಪುತ್ತೂರಿನ ಪುಣಚಕ್ಕೆ ಆಗಮಿಸಿದ್ದರು ಎಂದು ಹೇಳಲಾಗಿದ್ದು. ಬೆಳ್ಳಂಬೆಳಿಗ್ಗೆ ನಿದ್ರೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
