DAKSHINA KANNADA
ಪುತ್ತೂರು – ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ
ಪುತ್ತೂರು ಮಾರ್ಚ್ 27 : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕೆಮ್ಮಾಯಿಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ.
ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಮತ್ತೊಂದು i20 ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಎರಡು ಕಾರುಗಳು ಹಾನಿಗೊಂಡಿದ್ದು ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
You must be logged in to post a comment Login