Connect with us

    DAKSHINA KANNADA

    ಪುತ್ತೂರು: ಕಲ್ಲರ್ಪೆಯಲ್ಲಿ ಕಾರು -ಸ್ಕೂಟರ್‌ ಅಪಘಾತ-ನೈತಾಡಿಯ ಸ್ಕೂಟರ್‌ ಸವಾರ ಇಸ್ಮಾಯಿಲ್‌ ಮೃತ್ಯು

    ಪುತ್ತೂರು, ಜೂನ್ 20: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮುಂಜಾನೆ 7ಗಂಟೆ ಸುಮಾರಿಗೆ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್‌ ಮೃತಪಟ್ಟಿದ್ದಾರೆ.

    ಇಸ್ಮಾಯಿಲ್‌ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್‌ ನಜ್ಜುಗುಜ್ಜಾಗಿದೆ.ಅಪಘಾತಕ್ಕೊಳಗಾದ ಮಡಿಕೇರಿ ನೊಂದಾಯಿತ ಕಾರಿನಲ್ಲಿದ್ದವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

    ಮೃತ ಇಸ್ಮಾಯಿಲ್‌ ಪತ್ನಿ, ಮೂರ ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಸಂಪ್ಯ ಪೊಲೀಸರು ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply