DAKSHINA KANNADA
ಪುತ್ತೂರು ಕೋಅಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ12 ಸ್ಥಾನಗಳಲ್ಲಿಯೂ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ
ಪುತ್ತೂರು ಜನವರಿ 25: ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಗೆ 12 ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿಯೂ ಸಹಕಾರ ಭಾರತಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಸಾಮಾನ್ಯ ಮೀಸಲು ಸ್ಥಾನದಿಂದ ಬ್ಯಾಂಕಿನ ಹಾಲಿ ಅಧ್ಯಕ್ಷ ಕಿಶೋರ್ ಕೊಳತ್ತಾಯ, ಚಂದ್ರಶೇಖರ ರಾವ್ ಬಪ್ಪಳಿಗೆ, ಸುಜೀಂದ್ರ ಪ್ರಭು, ರಾಜು ಶೆಟ್ಟಿ, ಶ್ರೀಧರ ಗೌಡ ಕಣಜಾಲು, ಶ್ರೀಧರ ಪಟ್ಲ, ರಾಮಚಂದ್ರ ಕಾಮತ್, ಮಹಿಳಾ ಮೀಸಲು ಸ್ಥಾನದಿಂದ ವೀಣಾ, ಸೀಮಾ, ಪ.ಜಾತಿ ಮೀಸಲು ಸ್ಥಾನದಿಂದ ಗಣೇಶ್ ಕೌಕ್ರಾಡಿ, ಹಿಂದುಳಿದ ವರ್ಗ ಎ ಮೀಸಲು ಸ್ಥಾನದಿಂದ ಮಲ್ಲೇಶ್ ಕುಮಾರ್, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಕಿರಣ್ ಕುಮಾರ್ ರೈ ಅವರು ಗೆಲುವು ಸಾಧಿಸಿದ್ದಾರೆ. 13 ಸ್ಥಾನಗಳ ಪೈಕಿ ಪ.ಪಂಗಡ ಮೀಸಲು ಸ್ಥಾನದಿಂದ ಸಹಕಾರ ಭಾರತಿಯ ಹರೀಶ್ ಬಿಜತ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.
ಇದೆ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠoದೂರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ಸಹಕಾರಿ ದಿಗ್ಗಜ ಮೊಳಹಳ್ಳಿ ಶಿವರಾಯರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಟೌನ್ ಬ್ಯಾಂಕಿನಿಂದ ಬಿಜೆಪಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದರು