DAKSHINA KANNADA
ಪುತ್ತೂರು – ನೇಣಿಗೆ ಶರಣಾದ ಕಾಲೇಜು ವಿಧ್ಯಾರ್ಥಿನಿ

ಪುತ್ತೂರು ಸೆಪ್ಟೆಂಬರ್ 25: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ.
ಮೃತಳನ್ನು ತೃತೀಯ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಎಂದು ಗುರುತಿಸಲಾಗಿದೆ. ಈಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಿಲೀಂಗ್ ಪ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
