DAKSHINA KANNADA
ಪುತ್ತೂರು: ಬಿಜೆಪಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಅಭಿನಂದನೆ!
ಪುತ್ತೂರು, ಡಿಸೆಂಬರ್ 16: ಪುತ್ತೂರಿನಲ್ಲಿ ಇಂದು ವಿಚಿತ್ರ ಬೆಳವಣಿಯಾಗಿದ್ದು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ಸತ್ಯ ಮಾತನಾಡಿದ್ದಾನೆ ಎಂದು ಅಭಿನಂದನೆ ಸಲ್ಲಿಸಿದ ಬಿಜೆಪಿಗರು ಅಭಿನಂದನೆ ಸಲ್ಲಿಸಿದ್ದಾರೆ. ಹಕೀಮ್ ಕೂರ್ನಡ್ಕ ಎನ್ನುವ ಕಾಂಗ್ರೆಸ್ ಕಾರ್ಯಕರ್ತ, ಇತ್ತೀಚೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧವಾಗಿ ಮಾತನಾಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಕೀಮ್ ಕೂರ್ನಡ್ಕ ಆಡಿಯೋ ಹಂಚಿಕೊಂಡಿದ್ದರು. ಶಾಸಕ ಅಶೋಕ್ ಕುಮಾರ್ ರೈ ಶಾಸಕರಾದ ಬಳಿಕ ಒಂದೇ ಒಂದು ಕೆಲಸ ಮಾಡಿಲ್ಲ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ರಸ್ತೆಗಳು ಕೆಟ್ಟು ಹೋಗಿದೆ. ಹಿಂದೆ ಶಾಸಕರಾಗಿದ್ದ ಬಿಜೆಪಿಯ ಸಂಜೀವ ಮಠಂದೂರು ಮಾಡಿದ ಕೆಲಸಗಳು ಜನರಿಗೆ ಕಾಣುತ್ತಿದೆ. ಆದರೆ ಕಾಂಗ್ರೆಸ್ ಶಾಸಕರು ಕೇವಲ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ.
ಇದೇ ಹೇಳಿಕೆಯನ್ನು ಬಿಜೆಪಿ ಪ್ರತಿಭಟನೆಯ ವೇಳೆ ಪ್ರಸ್ತಾಪಿಸಿದ ಬಿಜೆಪಿ ನಾಯಕರು, ಕಾಂಗ್ರೆಸ್ ಕಾರ್ಯಕರ್ತರಿಗೆ ಇದೀಗ ಸತ್ಯ ಅರ್ಥವಾಗಿದೆ. ಈ ಕಾರಣಕ್ಕೆ ಬಿಜೆಪಿ ಆತನನ್ನು ಅಭಿನಂದಿಸುತ್ತದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.