DAKSHINA KANNADA
ಕಾಂಗ್ರೇಸ್ ಹೈಕಮಾಂಡ್ ಗೆ ಎಚ್ಚರಿಕೆ ರವಾನಿಸಿದ ಪುತ್ತೂರು ಮಹಿಳಾ ಕಾಂಗ್ರೇಸ್
ಪುತ್ತೂರು ಎಪ್ರಿಲ್ 12: ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರಿಗೆ ಕಾಂಗ್ರೇಸ್ ಟಿಕೆಟ್ ತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇದರ ಬೆನ್ನಲ್ಲೆ ಇದೀಗ ಪುತ್ತೂರಿನಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ಅಸಮಧಾನ ಹೊಗೆಯಾಡಲಾರಂಭಿಸಿದ್ದು, ಪುತ್ತೂರು ಮಹಿಳಾ ಕಾಂಗ್ರೇಸ್ ಹೈಕಮಾಂಡ್ ಗೆ ಎಚ್ಚರಿಕೆ ರವಾನಿಸಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮತನಾಡಿದ ಪುತ್ತೂರು ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶಾರದಾ ಅರಸ್ ಗೃಹಲಕ್ಷ್ಮಿ ಕಾರ್ಯಕ್ರಮದ ಮೂಲಕ ಮಹಿಳೆಗೆ ರಾಜಕಾರಣದಲ್ಲಿ ಆದ್ಯತೆ ನೀಡಲು ಕಾಂಗ್ರೇಸ್ ಮುಖಂಡೆ ಪ್ರಿಯಾಂಕಾ ಗಾಂಧಿ ನಿರ್ಧಾರ ಮಾಡಿದ್ದಾರೆ. ಆದರೆ ಈವರೆಗೆ ಪ್ರಕಟವಾದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಬೆರಳೆಣಿಕೆಯ ಮಹಿಳೆಯರಿಗೆ ಮಾತ್ರ ಅವಕಾಶ, ಈ ಮೂಲಕ ಕಾಂಗ್ರೇಸ್ ಮಹಿಳೆಯರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿಗೆ ಟಿಕೆಟ್ ನೀಡದೇ ಹೋದಲ್ಲಿ ಮಹಿಳಾ ಕಾಂಗ್ರೆಸ್ ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಲು ನಿರ್ಧರಿಸಲಾಗಿದೆ ಎಂದರು.
ಶಾಸಕಿಯಾಗಿ ಶಕುಂತಲಾ ಶೆಟ್ಟಿ ಪುತ್ತೂರಿಗೆ ಹಲವು ಕೊಡುಗೆ ನೀಡಿದವರು, ಅಲ್ಲದೆ ಮಹಿಳೆಯರನ್ನು ಸಂಘಟಿಸುವ ಕೆಲಸವನ್ನು ನಿರಂತರ ಮಾಡಿದ್ದಾರೆ. ಆದರೆ ಈ ಬಾರಿ ಶಕುಂತಲಾ ಶೆಟ್ಟಿ ಬದಲಿಗೆ ಬೇರೆ ಅಭ್ಯರ್ಥಿಗೆ ಅವಕಾಶ ನೀಡಲಾಗುತ್ತಿದೆ ಎನ್ನುವ ಸಂಶಯ ಮೂಡುತ್ತದೆ. ಹೈಕಮಾಂಡ್ ತನ್ನ ನಿರ್ಧಾರವನ್ನು ಬದಲಾಯಿಸಬೇಕು ಎಂದರು.