DAKSHINA KANNADA
ಪುತ್ತೂರು – ನಾಳೆ ಪುತ್ತೂರಿನಲ್ಲಿ ಕಾಂಗ್ರೆಸ್ ಸಮಾವೇಶ

ಪುತ್ತೂರು ಎಪ್ರಿಲ್ 22: ಪುತ್ತೂರಿನಲ್ಲಿ ನಾಳೆ ಕಾಂಗ್ರೇಸ್ ಸಮಾವೇಶ ಏರ್ಪಡಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಸುದ್ದಿಗೋಷ್ಠಿ ಮಾತನಾಡಿದ ಅವರು ಏಪ್ರಿಲ್ 16 ರಂದು ಪುತ್ತೂರಿನಲ್ಲಿ ಕಾಂಗ್ರೆಸ್ ರೋಡ್ ಶೋ ನಿಗದಿಯಾಗಿತ್ತು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರೋಡ್ ಶೋ ನಲ್ಲಿ ಭಾಗವಹಿಸಬೇಕಿತ್ತು. ಈ ಹಿನ್ನೆಲೆಯಲ್ಲಿ ರೋಡ್ ಶೋ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಆಗುವ ನಿಟ್ಟಿನಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದರು. ಸಮಾವೇಶದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಮುಖಂಡ ರಮಾನಾಥ ರೈ ಭಾಗಿಯಾಗಲಿದ್ದಾರೆ. ಕಿಲ್ಲೆ ಮೈದಾನದಲ್ಲಿ ಸುಮಾರು 5 ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದರು.
