ಪುತ್ತೂರು ಮೇ01: ಬೋರ್ ವೆಲ್ ನ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಅರಿಯಡ್ಕ ಗ್ರಾಮದ ಬೇಂಗತ್ತಡ್ಕ ಎಂಬಲ್ಲಿ ಮಹಿಳೆಯೊಬ್ಬರು ಬುಧವಾರ ಮೃತಪಟ್ಟಿದ್ದಾರೆ.


ಅರಿಯಡ್ಕ ಗ್ರಾಮದ ಬೇಂಗತ್ತಡ್ಕ ನಿವಾಸಿ ದೇವಪ್ಪ ನಾಯ್ಕ ಅವರ ಪತ್ನಿ ಭಾಗೀರಥಿ (59) ಮೃತಪಟ್ಟವರು. ಮನೆಯ ತಾರಸಿಯ ಮೇಲೆ ಬದಿಯಲ್ಲಿ ಮಳೆನೀರು ತುಂಬಿಕೊಂಡಿತ್ತು. ಭಾಗೀರಥಿ ಅವರು ತಾರಸಿಗೆ ಹೋಗಿ ಸ್ವಚ್ಛ ಮಾಡುತ್ತಿದ್ದ ವೇಳೆ ಮನೆಯ ಬದಿಯಲ್ಲಿ ಹಾದು ಹೋಗಿದ್ದ ಕೊಳವೆಬಾವಿ ಸಂಪರ್ಕದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information