Connect with us

DAKSHINA KANNADA

ಪುತ್ತೂರು ಡಬ್ಬಲ್ ಮರ್ಡರ್ ಕೇಸ್ ಪ್ರಮುಖ ಆರೋಪಿ ಆರೆಸ್ಟ್

ಪುತ್ತೂರು ಡಬ್ಬಲ್ ಮರ್ಡರ್ ಕೇಸ್ ಪ್ರಮುಖ ಆರೋಪಿ ಆರೆಸ್ಟ್

ಪುತ್ತೂರು ನವೆಂಬರ್ 20: ಪುತ್ತೂರು ಡಬ್ಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಬೆಳಕಿಗೆ ಬಂದ 24 ಗಂಟೆಯ ಒಳಗೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಪುತ್ತೂರು ಕುರಿಯ ಗ್ರಾಮದ ಕಟ್ಟತ್ತಾರು ನಿವಾಸಿ ಕರೀಂ ಖಾನ್ (29) ಎಂದು ಗುರುತಿಸಲಾಗಿದೆ. ಪುತ್ತೂರಿನ ಕುರಿಯ ಎಂಬಲ್ಲಿ ಭಾನುವಾರ ಈ ಜೋಡಿಕೊಲೆ ನಡೆದಿದ್ದು, ನಿನ್ನೆ ಘಟನೆ ಬೆಳಕಿಗೆ ಬಂದಿದೆ. ಹಣಕಾಸಿನ ಮನಸ್ತಾಪ ಹಾಗೂ ಕಳ್ಳತನ ಈ ಕೊಲೆಗೆ ಕಾರಣ ಎಂದು ಹೇಳಲಾಗಿದೆ.

ಕೊಲೆ ಆರೋಪಿ ಕರೀಂಖಾನ್ ಮನೆಯಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ಮನೆಗೆ ನುಗ್ಗಿದ್ದು, ಕಳ್ಳತನ ಮಾಡುವ ಸಂದರ್ಭ ಮನೆಯವರ ಗಮನಕ್ಕೆ ಬಂದ ಹಿನ್ನಲೆ, ಮನೆಯಲ್ಲಿ ಇದ್ದ ಕತ್ತಿಯನ್ನು ಬಳಸಿ ಮನೆಯಲ್ಲಿದ್ದ ಶೇಕ್ ಕೊಗ್ಗು ಸಾಹೇಬ್ ( 70 ವರ್ಷ), ಶಾಮಿಯಾ ಭಾನು (16 ವರ್ಷ) ಹಾಗೂ ಖತೀಜಾಬಿ (65 ವರ್ಷ) ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭ ಶೇಕ್ ಕೊಗ್ಗು ಸಾಹೇಬ್ ಹಾಗೂ ಶಾಮಿಯಾ ಭಾನು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಖತೀಜಾಬಿ (65 ವರ್ಷ) ಗಂಭೀರವಾಗಿ ಗಾಯಗೊಂಡಿದ್ದರು.

ಹಲ್ಲೆ ನಡೆಸಿದ ಬಳಿ ಆರೋಪಿ ಮನೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಹಾಗೂ 6,000 ನಗದನ್ನು ಕಳ್ಳತನ ನಡೆಸಿ ಮನೆಯ ಹಿಂಬಾಗಿಲಿನ ಮೂಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪುತ್ತೂರು ಗ್ರಾಮಾಂತರ ಪೊಲೀಸರು ಠಾಣಾ ವ್ಯಾಪ್ತಿಯ ಕುರಿಯ ಗ್ರಾಮದ ಬೀಟ್ ಸಿಬ್ಬಂದಿ ಭೀಮ್ ಶೇನ್ ರವರು ನೀಡಿದ ಸುಳಿವಿನ ಅಧಾರದಲ್ಲಿ ಸದರಿ ಆರೋಪಿಯನ್ನು ದಿನಾಂಕ ಬಂಧಿಸಿದ್ದು ತನಿಖೆ ಪ್ರಗತಿಯಲ್ಲಿರುತ್ತದೆ. ಆರೋಪಿಯ ಕೈ ಗೆ ಕೃತ್ಯ ನಡೆಸುವ ವೇಳೆ ಉಂಟಾದ ಘರ್ಷಣೆಯಲ್ಲಿ ಗಾಯವಾಗಿದ್ದು, ಈ ಬಗ್ಗೆ ಚಿಕಿತ್ಸೆ ನೀಡಲಾಗಿದೆ.

Facebook Comments

comments