DAKSHINA KANNADA
ಪುತ್ತೂರು ಎಲೆಕ್ಟ್ರಿಕ್ ಅಟೋರಿಕ್ಷಾ ಪಲ್ಟಿ: ಚಾಲಕ ಮೃತ್ಯು
ಪುತ್ತೂರು ಡಿಸೆಂಬರ್ 22: ಎಲೆಕ್ಟಿಕ್ ಆಟೋ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಭಾನುವಾರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಬೈಪಾಸ್ ನಲ್ಲಿ ಸಂಭವಿಸಿದೆ. ಮೃತರನ್ನು ಬೊಳುವಾರು ನಿವಾಸಿ ಸೂರ್ಯ ಕುಮಾರ್(64) ಎಂದು ಗುರುತಿಸಲಾಗಿದೆ.
ಸೂರ್ಯ ಅವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ನಾಯಿ ಯೊಂದು ಅಡ್ಡ ಬಂದಿದೆ ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿತ್ತು. ತಕ್ಷಣವೇ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಚಾಲಕ ಸೂರ್ಯ ಕುಮಾರ್ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಅಲ್ಲಿ ಅವರು ಮೃತಪಟ್ಟಿದ್ದಾರೆ. ಗಾಯಗೊಂಡ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.