LATEST NEWS
ಪುತ್ತೂರು – ಮಾಜಿ ತಹಶೀಲ್ದಾರ್ ಕೋಚಣ್ಣ ರೈ ಚಿಲ್ಮೆತ್ತಾರು ನಿಧನ
ಮಂಗಳೂರು ಮಾರ್ಚ್ 27 : ಪುತ್ತೂರಿನ ಅಭಿವೃದ್ದಿಯಲ್ಲಿ ಮಹತ್ತರ ಪಾತ್ರವಹಿಸಿ ಅಪಾರ ಜನಮನ್ನಣೆಗೆ ಪಾತ್ರವಾಗಿದ್ದ ಮಾಜಿ ತಹಶೀಲ್ದಾರ್ ಕೋಚಣ್ಣ ರೈ ಚಿಲ್ಮೆತ್ತಾರು (85) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ ಮಗನ ಮನೆಯಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಅಲ್ಲಿಯೇ ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.
ತಮ್ಮ ಅಧಿಕಾರವಧಿಯಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಅರ್ಹವಾದ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಟ್ಟ ಹೆಗ್ಗಳಿಕೆ ಕೋಚಣ್ಣ ರೈ ಅವರದು , ಬೆಳ್ತಂಗಡಿಯಲ್ಲಿ ಸಾವಿರಾರು ದೀನ ದಲಿತರಿಗೆ ಅತ್ಯಂತ ಸುಲಭವಾಗಿ ಹಾಗೂ ಸುಲಲಿತವಾಗಿ ನಿವೇಶನದ ಹಕ್ಕು ಪತ್ರವನ್ನು ಒದಗಿಸಿದವರು ಇವರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 14 ಎಕ್ರೆ ಜಾಗವನ್ನು ತನ್ನ ವಿಶೇಷಾಧಿಕಾರದಿಂದ ನೀಡಿದ್ದಾರೆ. ಮೊಟ್ಟೆತ್ತಡ್ಕದಲ್ಲಿ ಗೇರು ಸಂಶೋಧನ ಕೇಂದ್ರಕ್ಕೆ 36 ಎಕ್ರೆ ಜಾಗ, ಪುತ್ತೂರಿಗೆ ಬೈಪಾಸ್ ರಸ್ತೆಯ ಸೌಲಭ್ಯ, ಬಿರುಮಲೆ ಬೆಟ್ಟದ ಅಭಿವೃದ್ಧಯ ಹರಿಕಾರನಾಗಿ ಪುತ್ತೂರಿನ ಸಮಗ್ರ ಅಭಿವೃದ್ದಿಗೆ ದಿಕ್ಕು ಕಲ್ಪಿಸಿದವರು ಸಮಾಜದಲ್ಲಿ ಹೆಸರನ್ನು ಪಡೆದಿದ್ದಾರೆ.