Connect with us

    DAKSHINA KANNADA

    ಪುತ್ತೂರು – ಪಟಾಕಿ ಗೊಡೌನ್ ನಲ್ಲಿ ಬೆಂಕಿ ಆಕಸ್ಮಿಕ

    ಪುತ್ತೂರು ನವೆಂಬರ್ 1: ಪುತ್ತೂರಿನ ಪಟಾಕಿ ಗೊಡೌನ್ ಗೆ ಬೆಂಕಿ ಆಕಸ್ಮಿಕ ಸಂಭವಿಸಿ ಲಕ್ಷಾಂತರ ರೂಪಾಯಿ ಪಟಾಕಿ ನಾಶವಾದ ನಡೆದಿದೆ.


    ಪುತ್ತೂರಿನ ಆರಾಧ್ಯ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿದ್ದ ಪಟಾಕಿ ಗೊಡೌನ್ ನಲ್ಲಿ ಶೇಖರಿಸಿಟ್ಟ ಪಟಾಕಿ ಸಂಜೆ 6 ಗಂಟೆ ಸಮಯಕ್ಕೆ ಸಿಡಿಯಲು ಪ್ರಾರಂಭವಾಯಿತು. ಪಟಾಕಿ ಸಿಡಿಯುವ ಶಬ್ದಕ್ಕೆ ದರ್ಬೆ ಸುತ್ತಮುತ್ತಲಿನ ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ಆ ಕಟ್ಟಡದಲ್ಲಿರುವ ಎಲ್ಲಾ ಅಂಗಡಿಯವರು ಬಂದ್ ಮಾಡಿ ಹೊರ ಬಂದಿದ್ದಾರೆ.

    ದರ್ಬೆಯಲ್ಲಿ ಪಟಾಕಿ ಮಾಡುವವರಿಗೆ ಸೇರಿದ ಪಟಾಕಿ ಎನ್ನಲಾಗಿದೆ. ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಈ ಘಟನೆ ನಡೆದಿದೆಯ ಅಥವ ಬೆಂಕಿ ಆಕಸ್ಮಿಕ ನಡೆದಿದೆಯ ಎನ್ನುವ ಬಗ್ಗೆ ತನಿಖೆಯಿಂದ ತಿಳಿದುಬರಬೇಕಷ್ಟೇ. ಪುತ್ತೂರು ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply