Connect with us

DAKSHINA KANNADA

ಪುತ್ತೂರು ಕಾಲೇಜು ವಿಧ್ಯಾರ್ಥಿನಿ ಗ್ಯಾಂಗ್ ರೇಪ್ 5 ಮಂದಿ ಆರೋಪಿಗಳ ಬಂಧನ

ಪುತ್ತೂರು ಕಾಲೇಜು ವಿಧ್ಯಾರ್ಥಿನಿ ಗ್ಯಾಂಗ್ ರೇಪ್ 5 ಮಂದಿ ಆರೋಪಿಗಳ ಬಂಧನ

ಪುತ್ತೂರು ಜುಲೈ 3: ಪುತ್ತೂರು ಖಾಸಗಿ ಕಾಲೇಜಿನ ವಿಧ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂದಿಸಿದಂತೆ ಕೃತ್ಯ ಎಸಗಿದ 5 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಗುರುನಂದನ್, ಪ್ರಜ್ವಲ್, ಕಿಶನ್, ಸುನೀಲ್, ಪ್ರಖ್ಯಾತ್ ಎಂದು ಗುರುತಿಸಲಾಗಿದ್ದು, ಬಂಧಿತರೆಲ್ಲರೂ 19 ವರ್ಷ ವಯಸ್ಸಿನವರಾಗಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು.

ಸಹಪಾಠಿ ವಿದ್ಯಾರ್ಥಿನಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ, ಬಳಿಕ ಆ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಪ್ರಕರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಪತ್ತೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ವಿಶೇಷ ತಂಡ ರಚಿಸಿ ತನಿಖೆ ನಡೆಸಿದ್ದು, 5 ಮಂದಿ ಪ್ರಮುಖ ಆರೋಪಿ ವಿಧ್ಯಾರ್ಥಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ತಮ್ಮ ಕಾಲೇಜಿನ ಸಹಪಾಠಿಯನ್ನೇ ಮಾತನಾಡುವ ಉದ್ಧೇಶದಿಂದ ಕಾರಿನಲ್ಲಿ ಕುಳ್ಳಿರಿಸಿ ಅಜ್ಞಾತ ಸ್ಥಳಕ್ಕೆ ಕೊಂಡೊಯ್ದಿದ್ದ ಈ ನಾಲ್ವರು ವಿದ್ಯಾರ್ಥಿಗಳು ವಿದ್ಯಾರ್ಥಿನಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಲ್ಲದೆ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಈ ಸಂಬಂಧ ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಅತ್ಯಾಚಾರ ನಡೆಸಿದ 5 ವಿದ್ಯಾರ್ಥಿಗಳ ವಿರುದ್ಧ ಅತ್ಯಾಚಾರ ಹಾಗೂ ದಲಿತ ದೌರ್ಜನ್ಯ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ನಾಲ್ಕು ಪೋಲೀಸ್ ತಂಡವನ್ನು ರಚಿಸಿ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಶೋಧ ಕಾರ್ಯ ನಡೆಸಲಾಗಿತ್ತು.

ಈ ಘಟನೆ ಕಳೆದ ಫೆಬ್ರವರಿ ತಿಂಗಳಿನಲ್ಲಿ ನಡೆದಿರುವುದಾಗಿ ತಿಳಿದುಬಂದಿದ್ದು, ಕಾಲೇಜಿನಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ನಾಲ್ವರು ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರ ನಡೆಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಅಮಲು ಪದಾರ್ಥ ನೀಡಿರುವ ಶಂಕೆಯೂ ವ್ಯಕ್ತವಾಗಿದ್ದರೂ, ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ಪೋಲೀಸರಲ್ಲಿ ಅಮಲು ಪದಾರ್ಥ ನೀಡಿರುವ ವಿಚಾರವನ್ನು ಅಲ್ಲಗಳೆದಿದ್ದಾಳೆ. ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿದ ಆರೋಪಿ ವಿದ್ಯಾರ್ಥಿಗಳ ನಡುವೆ ವೈಮನಸ್ಸು ಬಂದ ಹಿನ್ನಲೆಯಲ್ಲಿ ಆರೋಪಿಗಳಲ್ಲೊಬ್ಬ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ ಎನ್ನಲಾಗಿದೆ.

ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ಗ್ರಾಮಪಂಚಾಯತ್ ಸದಸ್ಯೆಯೊಬ್ಬರ ಮಗಳಾಗಿದ್ದಾಳೆ. ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿದ ಬಳಿಕ ಈ ವಿಚಾರವನ್ನು ಹೊರಗಡೆ ಹೇಳಿದಲ್ಲಿ ಕೊಲೆ ಮಾಡುವ ಬೆದರಿಕೆಯನ್ನೂ ವಿದ್ಯಾರ್ಥಿನಿಗೆ ಆರೋಪಿಗಳು ಹಾಕಿದ್ದರು.

ಘಟನೆಯು ಕಾಲೇಜಿನ ಆವರಣದಲ್ಲಿ ನಡೆಯದ ಕಾರಣ ಕಾಲೇಜಿನ ಆಡಳಿತ ಮಂಡಳಿಗೆ ಈ ವಿಚಾರ ಗಮನಕ್ಕೇ ಬಂದಿಲ್ಲ. ಈ ನಡುವೆ ವಿಡಿಯೋ ವೈರಲ್ ಆದ ಬಳಿಕ ಇದೀಗ ಕಾಲೇಜು ಆಡಳಿತ ಮಂಡಳಿ ಪ್ರಕರಣದಲ್ಲಿ ಭಾಗಿಯಾದ ಆರೋಪಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ತೆಗೆದುಹಾಕಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *