DAKSHINA KANNADA
ಪುತ್ತೂರು ಅಕ್ರಮ ಗಾಂಜಾ ಸಾಗಾಟಕ್ಕೆ ಯತ್ನ – 40 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು
ಪುತ್ತೂರು ಜನವರಿ 18:ಪುತ್ತೂರಿನ ಪುರುಷರ ಕಟ್ಟೆ ಎಂಬಲ್ಲಿ ಅಕ್ರಮ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಕಡಬ ಸವಣೂರು ಗ್ರಾಮದ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ. ಈತ ಪುತ್ತೂರು ತಾಲೂಕು ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ತಿರುವಿನ ಬಳಿ ಬೈಕ್‍ನಲ್ಲಿ ಬಂದು ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನಿಂದ ಸುಮಾರು 4 0,000 ಮೌಲ್ಯದ ಎರಡು ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಅಂದಾಜು 12,000 ಮೌಲ್ಯದ ಮೋಟಾರು ಸೈಕಲ್ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ..