Connect with us

    DAKSHINA KANNADA

    ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರ ಬಂಧನ

    ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರ ಬಂಧನ

    ಪುತ್ತೂರು ಜೂನ್ 19: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಪಶ್ಚಿಮಬಂಗಾಳದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತರನ್ನು ಪಶ್ಚಿಮಬಂಗಾಳ ಮೂಲದ ಮೊಶರಪ್ ಹೊಸೈನ್ ಬವಾರಿ ಮತ್ತು ಸೊಹೈಲ್ ಆಲಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 25 ಸಾವಿರ ರೂಪಾಯಿ ಬೆಲೆ ಬಾಳುವ 988 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

    ಪುತ್ತೂರು ಬೈಪಾಸ್ ರಸ್ತೆ ಲಿನೆಟ್ ಜಂಕ್ಷನ್ ಬಳಿ ಅಪರಿಚಿತರು ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪುತ್ತೂರು ಪೊಲೀಸರು ಆರೋಪಿಗಳನ್ನು ಬಂಧಿಸಿ, ಅಕ್ರಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply