ಪುತ್ತೂರು,ಫೆಬ್ರವರಿ 08: ಜನವರಿಯಲ್ಲಿ 1 ಕ್ವಿಂಟಾಲ್ ಗಾಂಜಾ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಜಾ ಸಪ್ಲೈ ಮಾಡಿದ ಓಡಿಶಾ ರಾಜ್ಯದ ಪ್ರಮುಖ ಆರೋಪಿಯನ್ನು ಪೊಲೀಲಸರು ಅರೆಸ್ಟ್ ಮಾಡಿದ್ದು, ಅದರೊಂದಿಗೆ ಗಾಂಜಾ ಸಾಗಾಟಕ್ಕೆ ವಾಹನ ಮತ್ತು ಹಣದ ವ್ಯವಸ್ತೆ ಮಾಡಿದ್ದ ಇಬ್ಬರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27), ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಮತ್ತು ಒರಿಸ್ಸಾ ರಾಜ್ಯದ ದೀಪಕ್ ಪಾತ್ರ (37) ಎಂದು ಗುರುತಿಸಲಾಗಿದೆ.
ಜನವರಿ 19 ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆಗೆ ಇಳಿದ ಪೊಲೀಸರು ಆರೋಪಿಗಳಿಗೆ ಹಣ ಹಾಗೂ ವಾಹನದ ವ್ಯವಸ್ಥೆ ಮಾಡಿಕೊಟ್ಟ ಆರೋಪದ ಮೇಲೆ ಮಹಮ್ಮದ್ ಫಯಾಜ್ ಡಿ.ಕೆ, ನಝಿರ್ ಮತ್ತು ಆರೋಪಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ದೀಪಕ್ ಪಾತ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಗೆ ಮಾದಕವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ರಾಜ್ಯದ ದೀಪಕ್ ಪಾತ್ರ (37) ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ನೇತೃತ್ವದಲ್ಲಿ, ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ ತೆರಳಿ ದಸ್ತಗಿರಿ ಮಾಡಿದ್ದು, ಈ ವೇಳೆ ಆತನಿಂದ ರೂ 80,೦00/- ಮೌಲ್ಯದ, 1 ಕೆ.ಜಿ 788 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿರುತ್ತದೆ.
ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ, ಹಾಗೂ ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೆನ್, ಸುರೇಶ್ ಮತ್ತು ದಿವ್ಯಾಪ್ರಕಾಶ್ ಅವರುಗಳು ಭಾಗವಹಿಸಿದ್ದರು.