Connect with us

    DAKSHINA KANNADA

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ ನೂತನ ಡಯಾಲಿಸೀಸ್ ಘಟಕದ ಉದ್ಘಾಟನೆ

    ಪುತ್ತೂರು ಮಾರ್ಚ್ 27: ಎನ್.ಡಿ.ಆರ್.ಎಫ್ ಅನುದಾನದಲ್ಲಿ ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ ನೂತನ ಡಯಾಲಿಸೀಸ್ ಘಟಕದ ಉದ್ಘಾಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು.


    ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಯ ಮಟ್ಟಕ್ಕೆ ತರುವ ಪ್ರಯತ್ನದಲ್ಲಿ ಕೇಂದ್ರದ ಮೋದಿ ಸರಕಾರ ಮಾಡುತ್ತಿದ್ದು,ಈ ನಿಟ್ಟಿನಲ್ಲಿ ಪ್ರತೀ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ‌. ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ಸೇವೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಯಾಲಿಸೀಸ್ ಘಟಕದಲ್ಲಿ 13 ಯಂತ್ರಗಳು ಕಾರ್ಯಾಚರಣೆ ನಡೆಸಲಿದ್ದು, 70 ರೋಗಿಗಳಿಗೆ 24 ಗಂಟೆಗಳ ಸೇವೆಯನ್ನು ನೀಡಲಾಗುತ್ತಿದೆ ಎಂದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *