DAKSHINA KANNADA
ಪುತ್ತೂರು – ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು
ಪುತ್ತೂರು ಮೇ 11: ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕನೊಬ್ಬ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ.
ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆಯ ಸಿಂಚನವಾಗಿದ್ದು. ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು ಸಹಿತ ಮಿಂಚಿನಿಂದ ಕೂಡಿದ ಮಳೆ ಆಗಿದೆ.
ಈ ನಡುವೆ ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಾವನಪ್ಪಿದ್ದು , ಇಬ್ಬರು ಗಾಯಗೊಂಡಿದ್ದಾರೆ.
ಮೃತರನ್ನು ಉತ್ತರ ಪ್ರದೇಶ ಚೈನ್‌ಪುರ್ ಮೂಲದ ಶ್ರೀಕಿಶುನ್ ಎಂದು ಗುರುತಿಸಲಾಗಿದೆ. ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನದಿ ಬದಿಯಲ್ಲಿ ಮರಳುಗಾರಿಕೆ ಮಾಡುತ್ತಿದ್ದ ಉತ್ತರಪ್ರದೇಶದ ಕಾರ್ಮಿಕರು ಇದ್ದ ಶೆಡ್ ಗೆ ಸಿಡಿಲು ಬಡಿದಿದೆ. ಈ ವೇಳೆ ಓರ್ವ ಸಾವನಪ್ಪಿದವರೆ ಮತ್ತೆ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರಿಗೆ ಕರೆತರಲಾಗಿದೆ.