Connect with us

DAKSHINA KANNADA

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ

ಪುತ್ತೂರು ಜೂನ್ 06: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ ನಡೆಸಿದ ಘಟನೆ ನಡೆದಿದ್ದು,ಇದೀಗ ಆಸ್ಪತ್ರೆ ಸಿಬ್ಬಂದಿ ತಮ್ಮ ರಕ್ಷಣೆಗಾಗಿ ಆರೋಗ್ಯ ರಕ್ಷಾ ಸಮಿತಿ ಮೊರೆ ಹೋಗಿದ್ದಾರೆ.


ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ಗೆ ಬಂದ ಕಡೆಯವರು ವಿನಃ ಕಾರಣ ಡಿ ಗ್ರೂಪ್ ನೌಕರರ ವಿರುದ್ಧ ಹಲ್ಲೆಗೆ ಯತ್ನಿಸಿದ ಘಟನೆ ಜೂನ್ 5 ರಂದು ನಡೆದಿದೆ. ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರ ಪುರಂದರ ಅವರಿಗೆ ಸ್ಕ್ಯಾನಿಂಗ್‌ಗೆ ಬಂದ ಕಡೆಯವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ಎಬ್ಬಿಸಿದ್ದಾರೆಂದು ಆರೋಪಿಸಲಾಗಿದೆ.

ಈ ಕುರಿತು ಡಿ ಗ್ರೂಪ್ ನೌಕರರು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನೀಡಿದ ದೂರಿನಂತೆ ಆರೋಗ್ಯ ರಕ್ಷಾ ಸಮಿತಿ ನೇತೃತ್ವದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಮತ್ತು ಇತರ ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ತುರ್ತು ಸಭೆಯನ್ನು ನಡೆಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *