DAKSHINA KANNADA
ಪುತ್ತೂರು ಮಹಾಲಿಂಗೇಶ್ವರ ಜಾತ್ರೆಯಲ್ಲೂ ಅನ್ಯಕೋಮಿನ ವ್ಯಾಪಾರಿಗಳಿಗೆ ನಿಷೇಧ ಅಭಿಯಾನ
ಪುತ್ತೂರು ಮಾರ್ಚ್ 22: ಉಡುಪಿ ಬಳಿಕ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭ ನಡೆಯುವ ಪುತ್ತೂರು ಮೇಳದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ಎಪ್ರಿಲ್ 10 ರಿಂದ 25 ತನಕ ನಡೆಯುವ ಈ ವ್ಯವಹಾರ ಮೇಳ ನಡೆಯಲಿದ್ದು, ಲಕ್ಷಾಂತರ ಜನ ಜಾತ್ರೆಗೆ ಸೇರಲಿದ್ದಾರೆ. ಮಾಧ್ಯಮಗಳಲ್ಲಿ ಮೇಳದ ಬಗ್ಗೆ ಪ್ರಕಟಣೆ ನೀಡಲಾಗಿದ್ದು, ಕೇವಲ ಹಿಂದೂಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ಉಡುಪಿ ಜಿಲ್ಲೆಯಲ್ಲೂ ಇದೇ ರೀತಿ ದೇವಸ್ಥಾನಗಳ ಜಾತ್ರೆಗಳಲ್ಲಿ ಮುಸ್ಲಿಂ ರಿಗೆ ವ್ಯಾಪಾರಕ್ಕೆ ಅವಕಾಶ ನೀಡಿರಲಿಲ್ಲ.