ಪುತ್ತೂರು ಜನವರಿ 07: ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು,ದಕ್ಷಿಣಕನ್ನಡ ಜಿಲ್ಲಾ ಕೃಷಿಕ ಸಮಾಜ ಮಂಗಳೂರು ಹಾಗು ಇತರ ಸಂಘಸಂಸ್ಥೆಗಳ ಸಹಯೋಗದಲ್ಲಿ ಪುತ್ತೂರಿನಲ್ಲಿ ಮೂರು ದಿನಗಳ ಮೈಸೂರು ವಿಭಾಗ ಮಟ್ಟದ ಕೃಷಿಮೇಳ ನಡೆಯಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ವಿಜಯಕುಮಾರ್ ರೈ ಮಾಹಿತಿ ನೀಡಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು 8 ಜಿಲ್ಲೆಗಳನ್ನು ಒಳಗೊಂಡ ಈ ಮೈಸೂರು ವಿಭಾಗ ಮಟ್ಟದ ಕೃಷಿಮೇಳದಲ್ಲಿ ಎಲ್ಲಾ ಜಿಲ್ಲೆಗ‌ಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಮೂರು ದಿನಗಳ ಕಾಲವೂ ವಿವಿಧ ಬೆಳೆಗೆ ಸಂಬಂಧಿಸಿದಂತೆ ತಜ್ಞರು ಮತ್ತು ವಿಜ್ಞಾನಿಗಳಿಂದ ಮಾಹಿತಿ ಕಾರ್ಯಾಗಾರವೂ ನಡೆಯಲಿದ್ದು, ಸಕೃಷಿಕ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಲಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಗದ್ದೆಯಲ್ಲಿ ನಡೆಯಲಿರುವ ಈ ಮೇಳವನ್ನು ಕೃಷಿ ಸಚಿವ ಚೆಲುವರಾಯ ಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ

Share Information