ಪುತ್ತೂರು ಜೂನ್ 20: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ವಿಧಾನಪರಿಷತ್ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯಲ್ಲಿ ಕೆಲ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಪಕ್ಷ ಸಂಘಟನೆಯ ಕುರಿತು ಚಿಂತನೆ ಮಾಡಿದ್ದು ನಮಗೆ ಮುಂದಿನ ದಿನ ರಾಜ್ಯ ಬಿಜೆಪಿ ಸಂಘಟನೆ ಶಕ್ತಿಯುತವಾಗಬೇಕು ಮತ್ತು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಬರುವಂತೆ ಕಿಶೋರ್ ಕುಮಾರ್ ಅವರು ದೇವಳದಲ್ಲಿ ತುಪ್ಪದ ದೀಪ ಬೆಳಗಿಸಿ ಶ್ರೀ ದೇವರ ಸತ್ಯ ಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿದರು