DAKSHINA KANNADA
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ವ್ಯವಸ್ಥೆ ರದ್ದು…!!

ಪುತ್ತೂರು ಜುಲೈ 21: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇನ್ನು ಮುಂದೆ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ವಿತರಣೆ ವ್ಯವಸ್ಥೆಯನ್ನು ನಿಲ್ಲಿಸಲು ಚಿಂತಿಸಲಾಗಿದೆ ಎಂದು ಶಾಸಕ ಅಶೋಕ ರೈ ಹೇಳಿದ್ದಾರೆ.
ಪುತ್ತೂರಿನಲ್ಲಿ ಮಾತನಾಡಿದ ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನಿರ್ವಹಣೆಗೆ ಹಣದ ಕೊರತೆ ಎದುರಾಗಿದ್ದು, ಈ ಹಿನ್ನಲೆ ಮುಂದಿನ ದಿನಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಉಚಿತವಾಗಿ ನೀಡಲಾಗುತ್ತಿದ್ದ ಅನ್ನಪ್ರಸಾದ ಸೇವೆಯನ್ನು ನಿಲ್ಲಿಸಲು ಸೂಚಿಸಲಾಗಿದ್ದು, ಅನ್ನಪ್ರಸಾದ ಬೇಕಾದಲ್ಲಿ ಬೇಕಾದಲ್ಲಿ ಹಣ ಕೊಟ್ಟು ಪಡೆಯುವಂತೆ ಸೂಚನೆ ನೀಡಲಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಒಂದು ಊಟಕ್ಕೆ 50 ರೂಪಾಯಿ ದರ ನಿಗದಿಪಡಿಸಲಾಗಿದೆ. ಈ ಹಿಂದೆ ಎಲ್ಲಾ ಧಾರ್ಮಿಕ ಸಭೆ-ಸಮಾರಂಭಗಳಿಗೆ ಕ್ಷೇತ್ರದಿಂದ ಉಚಿತವಾಗಿ ಅನ್ನಪ್ರಸಾದ ನೀಡಲಾಗುತ್ತಿತ್ತು. ಆಡಳಿತ ಮಂಡಳಿಗೆ ಮನವಿ ನೀಡಿ ಈ ವ್ಯವಸ್ಥೆಯನ್ನು ಪಡೆಯಬಹುದಾಗಿತ್ತು. ಆದರೆ ಇನ್ನು ಮುಂದೆ ಉಚಿತ ಅನ್ನಪ್ರಸಾದಕ್ಕಿಲ್ಲ ಕ್ಷೇತ್ರದಲ್ಲಿ ಅವಕಾಶ ಇಲ್ಲ. ಹಣಕಾಸಿನ ಕೊರತೆಯಿಂದಾಗಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ವ್ಯವಸ್ಥೆ ಬಂದ್ ಆಗಿದೆ ಎಂದು ಹೇಳಲಾಗಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ, ದೇವಸ್ಥಾನಕ್ಕೆ ಬರುವ ಹಣ ದೇವಸ್ಥಾನದ ಖರ್ಚಿಗೆ ಖಾಲಿಯಾಗುತ್ತದೆ. ದೇವಸ್ಥಾನದಲ್ಲಿ ಯಾವುದೇ ಹಣ ಡೆಪಾಸಿಟ್ ಇಲ್ಲ ಎಂದರು. ದೇವಸ್ಥಾನದ ಆದಾಯವನ್ನು ಹೆಚ್ಚು ಮಾಡಲು ಚಿಂತನೆ ಮಾಡಲಾಗಿದ್ದು, ದೇವಸ್ಥಾನ ಸುತ್ತಮುತ್ತಲಿನ ಜಾಗದಲ್ಲಿ ವಾಣಿಜ್ಯ ಸೇವೆಗಳಿಗೆ ಬಳಸಲು ಚಿಂತನೆ ಮಾಡಲಾಗಿದೆ ಎಂದರು.