DAKSHINA KANNADA
ರನ್ ಓಡುವ ವೇಳೆ ಜಾರಿ ಬಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು ಫೆಬ್ರವರಿ 22: ರನ್ ಓಡುವ ಬರದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಜಾರಿ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಈ ಘಟನೆ ನಡೆದಿದೆ. ಬಂಟರ ಸಂಘದ ವತಿಯಿಂದ ನಡೆಯುತ್ತಿರುವ ಕ್ರೀಡಾಕೂಟ ಇದಾಗಿದ್ದು, ಕ್ರೀಡಾಕೂಟದಲ್ಲಿ ಶಾಸಕ ಅಶೋಕ್ ಕುಮಾರ್ ಭಾಗಿಯಾಗಿದ್ದರು.

ರನ್ ಓಡುವೆ ವೇಳೆ ವಿಕೆಟ್ ಹತ್ತಿರ ಆಯತಪ್ಪಿ ಜಾರಿ ಬಿದ್ದಿದ್ದಾರೆ. ಈ ವೇಳೆ ಬಿದ್ದ ಶಾಸಕರನ್ನು ಸಹ ಆಟಗಾರರು ಎತ್ತಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.