DAKSHINA KANNADA
ಪುತ್ತೂರು ನೈತಿಕ ಪೊಲೀಸ್ ಗಿರಿ ಪ್ರಕರಣ – ಬಂಧಿತರ ಸಂಖ್ಯೆ 4ಕ್ಕೆ ಏರಿಕೆ
ಪುತ್ತೂರು ಮೇ 04: ಹಿಂದೂ ಯುವತಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.
ತಾಲ್ಲೂಕಿನ ಮರೀಲ್ ಕಾಡುಮನೆ ನಿವಾಸಿ ಕೆ. ಇಬ್ರಾಹಿಂ ಅವರ ಪುತ್ರ ಮಹಮ್ಮದ್ ಫಾರಿಶ್ (18) ಹಿಂದೂ ಧರ್ಮದ ಯುವತಿಯೊಂದಿಗೆ ಇದ್ದಾಗ ಗುಂಪೊಂದು ಮಂಗಳವಾರ ಹಲ್ಲೆ ನಡೆಸಿತ್ತು. ಯುವಕನ ಮೈಮೇಲೆ ಬಾಸುಂಡೆಗಳು ಎದ್ದಿದ್ದವು.
ಯುವಕ ಮತ್ತು ಆತನ ಜೊತೆಗಿದ್ದ ಯುವತಿ ಇಬ್ಬರೂ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು. ಇಬ್ಬರೂ ನಗರದ ಮಾಲ್‌ವೊಂದರ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ್ದರು. ಬಳಿಕ ಜ್ಯೂಸ್ ಕುಡಿಯಲು ಬಸ್ ನಿಲ್ದಾಣದ ಬಳಿಯ ಮಳಿಗೆಗೆ ಒಟ್ಟಿಗೆ ಹೋಗಿದ್ದಾಗ ಯುವಕನ ಮೇಲೆ ಹಲ್ಲೆ ನಡೆದಿತ್ತು. ಗಾಯಾಳು ಚಿಕಿತ್ಸೆಗಾಗಿ ಯುವಕ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಕೃತ್ಯಕ್ಕೆ ಸಂಬಂಧಿಸಿದಂತೆ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ಸಿರ್ತಾಜೆ ಮನೆಯ ಪ್ರದೀಪ್ ಎಸ್ (19) ಎಂಬಾತನ್ನು ಪೊಲೀಸರು ಬಂಧಿಸಿದ್ದರು. ‘ಪ್ರಕರಣದ ಇತರ ಆರೋಪಿಗಳಾದ ಕೆದಂಬಾಡಿ ಗ್ರಾಮದ ತಿಂಗಳಾಡಿಯ ದಿನೇಶ್ ಗೌಡ (25), ಗುತ್ತುಮನೆಯ ನಿಶಾಂತ್ ಕುಮಾರ್ ಜಿ. (19)