DAKSHINA KANNADA
ಅಗಸ್ಟ್ 31 ರಂದು 14ನೇ ವರ್ಷ ಪುತ್ತೂರು ಮೊಸರು ಕುಡಿಕೆ ಉತ್ಸವ
ಪುತ್ತೂರು ಅಗಸ್ಟ್ 23: ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆಗಸ್ಟ್ 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಮತ್ತು ಉತ್ಸವ ಸಮಿತಿ ಅಧ್ಯಕ್ಷೆ ಕೃಷ್ಣವೇಣಿ ಮುಳಿಯ ಹಾಗು ಸಮಿತಿ ಸಂಚಾಲಕ ಪುತ್ತೂರು ಉಮೇಶ್ ನಾಯಕ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷದ್ ಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆರಂಭಗೊಂಡ ಶ್ರೀ ಕೃಷ್ಣ ಜನ್ಮಾಷ್ಟಮಿ ಪುತ್ತೂರಿನಲ್ಲಿ 14ನೇ ವರ್ಷದ ಸಂಭ್ರಮದಲ್ಲಿದೆ. ಈ ಸಂದರ್ಭ ಮೊಸರು ಕುಡಿಕೆ, ಶೋಭಾಯಾತ್ರೆ ಉತ್ಸವ, ಮುಕ್ತ ಕಬಡ್ಡಿ ಪಂದ್ಯಾಟ, ಜಿಲ್ಲಾ ಮಟ್ಟದ ಕೃಷ್ಣವೇಷ ಸ್ಪರ್ಧೆ, ಪುತ್ತೂರು ಮುದ್ದುಕೃಷ್ಣ, ಉದ್ದಕಂಬ, ವೀರ ಹಿಂದು ಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಲಿದೆ ಎಂದರು.
ಅಗಸ್ಟ್ 31ರಂದು ಮದ್ಯಾಹ್ನ ಗಂಟೆ 02-30ರಿಂದ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಮುಂಭಾಗದಿಂದ ಪುತ್ತೂರು ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ ಮತ್ತು ಹಿಂದೂ ಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಸಾಹನ ಸ್ಪರ್ಧೆಯ ಉದ್ಘಾಟನೆ ನಡೆಯಲಿದೆ. ಧ್ವಜ ಹಸ್ತಾಂತರ ಪ್ರದೀಪ್ ಸರಿಪಲ್ಲ, ವಿ.ಹಿಂ.ಪ ಮಂಗಳೂರು ವಿಭಾಗ ಪ್ರಚಾರ ಪ್ರಸಾರ ಪ್ರಮುಖ್ ಇವರು ನಡೆಸಲಿದ್ದಾರೆ ಎಂದರು.