DAKSHINA KANNADA
ಪುತ್ತೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರಿಂದ ಪಥಸಂಚಲನ

ಪುತ್ತೂರು, ಆಗಸ್ಟ್ 28: ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಪುತ್ತೂರು ಡಿವೈಎಸ್ಪಿ ಈರಯ್ಯ ಹೀರೇಮಠ ನೇತೃತ್ವದಲ್ಲಿ ಆಗಸ್ಟ್ 28ರಂದು ಪೊಲೀಸ್ ಪಥಸಂಚಲನ ನಡೆಯಿತು.
ಪುತ್ತೂರಿನ ದರ್ಬೆ ವೃತ್ತದಿಂದ ಬೊಳುವಾರು ತನಕ ಪಥಸಂಚಲನ ನಡೆಸಿದ ಪೊಲೀಸ್ ತಂಡ ಸಾರ್ವಜನಿಕರಿಗೆ ರಕ್ಷಣೆಯ ಭರವಸೆಯನ್ನು ನೀಡಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆಯಿಂದ ನಡೆಸುವ ನಿಟ್ಟಿನಲ್ಲಿ ಈ ವಿಶೇಷ ಪಥ ಸಂಚಲನಗಳನ್ನು ಬಹುತೇಕ ಎಲ್ಲಾ ನಗರಗಳಲ್ಲೂ ಆಯೋಜನೆ ಮಾಡಲಾಗಿದೆ