DAKSHINA KANNADA
ಪುತ್ತೂರು – ವೈದ್ಯರ ಮೇಲೆ ಹಲ್ಲೆ ಯತ್ನ – ಆರೋಪಿ ಬಂಧನಕ್ಕೆ ಒತ್ತಾಯಿಸಿ ಮತ್ತೆ ರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಪುತ್ತೂರು ಎಪ್ರಿಲ್ 27: ಪುತ್ತೂರು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಮತ್ತೆ ಪುತ್ತೂರಿನಲ್ಲಿ ರಾತ್ರಿ ಪೊಲೀಸ್ ಠಾಣೆ ಮುಂದೆ ವೈದ್ಯರು ಮತ್ತು ಹಿಂದೂ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ಪುತ್ತೂರಿನಲ್ಲಿ ರಾತ್ರಿ ಮತ್ತೆ ಪೊಲೀಸ್ ಠಾಣೆ ಮುಂದೆ ವೈದ್ಯರು ಹಾಗೂ ಹಿಂದೂ ಸಂಘಟನೆಗಳ ಪ್ರತಿಭಟನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ನಿನ್ನೆ ಬೆಳಿಗ್ಗೆ ಪೊಲೀಸ್ ಠಾಣೆ ಮುಂಭಾಗ ಹಾಗೂ ಬಳಿಕ ಮುಖ್ಯ ರಸ್ತೆ ತಡೆದು ಪ್ರತಿಭಟಿಸಿದ್ದ ವೈದ್ಯರು ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಆರೋಪಿ ಬಂಧನ ಮಾಡುವುದಾಗಿ ಪೊಲೀಸರು ಹಾಗೂ ಸ್ಥಳೀಯಯ ಶಾಸಕರು ಆಶ್ವಾಸನೆ ನೀಡಿದ್ದರು.

ಆದರೂ ಆರೋಪಿ ಬಂಧನಕ್ಕೆ ಪೊಲೀಸರು ಸಾಧ್ಯವಾಗದ ಕಾರಣ ನಿನ್ನೆ ರಾತ್ರಿ ಮತ್ತೆ ವೈದ್ಯರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಲು ಎಸ್ಪಿ ಆಗಮಿಸಿ ಮಾತುಕತೆ ನಡೆಸಿದ್ದಾರೆ.
ಇಂದು ಕೂಡ ಪುತ್ತೂರು ತಾಲೂಕಿನ ವೈದ್ಯರ ಮುಷ್ಕರ ಮುಂದುವರಿದಿದ್ದು, ಇಂದು ಹಲವು ವೈದ್ಯಕೀಯ ಸೇವೆ ಸ್ಥಗಿತಗೊಂಡಿದೆ. ಈ ನಡುವೆ ಮುಸ್ಲಿಂ ಒಕ್ಕೂಟದ ಪತ್ರಿಕಾಗೋಷ್ಠಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವೈದ್ಯರು, ನಾವು ಯಾವುದೇ ಕೋಮಿನವರ ವಿರುದ್ಧ ಹೋರಾಟ ಮಾಡುವುದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.