DAKSHINA KANNADA
ಪುತ್ತೂರು – ಸೌಜನ್ಯ ಸಾವಿನ ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗ ಗೌಡ ಸಂಘದಿಂದ ಹಕ್ಕೊತ್ತಾಯ ಸಭೆ

ಪುತ್ತೂರು ಅಗಸ್ಟ್ 02- ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಇದೀಗ ಪ್ರತಿಭಟನೆಗಳು ಹೆಚ್ಚಾಗಿದ್ದು, ವಿಧ್ಯಾರ್ಥಿನಿ ಸೌಜನ್ಯ ಸಾವಿನ ಮರು ತನಿಖೆಗೆ ಒತ್ತಾಯಿಸಿ ಹಕ್ಕೊತ್ತಾಯ ಒಕ್ಕಲಿಗ ಗೌಡ ಸಂಘದ ನೇತೃತ್ವದಲ್ಲಿ ಕಡಬದ ತಹಶೀಲ್ದಾರ್ ಕಛೇರಿ ಬಳಿ ಪ್ರತಿಭಟನಾ ಸಭೆ ನಡೆಯಿತು.
ಮೆರವಣಿಗೆಯ ಮೂಲಕ ಸಾಗಿ ಬಂದ ಪ್ರತಿಭಟನಾಕಾರರು, ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಬೇಕು, ನೈಜ ಆರೋಪಿಗಳ ಬಂಧನವಾಗಬೇಕೆಂದು ಆಗ್ರಹಿಸಿ ಹಕ್ಕೊತ್ತಾಯ ಮಂಡಿಸಿದರು.

https://youtu.be/YC6bQteu3sA