DAKSHINA KANNADA
ಪುತ್ತೂರು – ಪಿಯುಸಿ ವಿದ್ಯಾರ್ಥಿನಿ ನಾಪತ್ತೆ – ಪ್ರಕರಣ ದಾಖಲು

ಪುತ್ತೂರು ಜುಲೈ 03: ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತೆರಳಿದ್ದ ದ್ವಿತೀಯ ಪಿಯುಸಿ.ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನರ್ ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ನಾಪತ್ತೆಯಾದ ಯುವತಿ.
ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು ಮನೆಯಲ್ಲಿ ರೂಪ ಮತ್ತು ಆಕೆಯ ತಮ್ಮ ವಾಸವಿದ್ದು ನಿನ್ನೆ ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದಳು. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಮನೆಗೂ ಹೋಗದೆ ಸಂಬಂಧಿಕರಲ್ಲಿಗೂ ಹೋಗದೆ, ಸ್ನೇಹಿತರಲ್ಲಿಗೂ ತೆರಳದೆ ನಾಪತ್ತೆಯಾಗಿರುವುದಾಗಿ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಆಕೆ ಎಲ್ಲಿಯಾದರೂ ಕಂಡು ಬಂದಲ್ಲಿ ಕೂಡಲೇ 6361807956 / 8971783524 ಸಂಖ್ಯೆಯನ್ನು ಸಂಪರ್ಕಿಸಬೇಕಾಗಿ ತಿಳಿಸಲಾಗಿದೆ.