Connect with us

    DAKSHINA KANNADA

    ಪುತ್ತೂರು – ಅನಾರೋಗ್ಯದಿಂದ ವಿಧ್ಯಾರ್ಥಿನಿ ನಿಧನ

    ಪುತ್ತೂರು ಡಿಸೆಂಬರ್ 24: ಅನಾರೋಗ್ಯದಿಂದ ಬಳಲುತ್ತಿದ್ದ ವಿಧ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.


    ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ. ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ ಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರಿಗೆ ಇಂದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
    ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *