Connect with us

DAKSHINA KANNADA

ಪುತ್ತೂರು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಲಾಕ್ ಡೌನ್ ನಿಂದಾಗಿ ನಿಂತು ಹೋದ ಫಾಸ್ಟ್ ಪುಡ್ ವ್ಯಾಪಾರ

ಪುತ್ತೂರು ಜೂನ್ 11: ಲಾಕ್ ಡೌನ್ ನಿಂದಾಗಿ ವ್ಯಾಪಾರವಿಲ್ಲದೆ ವ್ಯಕ್ತಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಪಡೀಲ್ ಬಳಿ ನಡೆದಿದೆ.


ಮೃತ ವ್ಯಕ್ತಿಯನ್ನು ವಿಠಲ ನಾಯ್ಕ್ (63) ಎಂದು ಗುರುತಿಸಲಾಗಿದೆ. ಈತ ರಸ್ತೆ ಬದಿ ತಳ್ಳುಗಾಡಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದು, ಕೊರೊನಾ ಲಾಕ್ ಡೌನ್ ಬಳಿಕ ವ್ಯಾಪಾರ ಸಂಪೂರ್ಣ ನಿಂತಿದ್ದು. ಜೊತೆಗೆ ಅನಾರೋಗ್ಯದ ಹಿನ್ನಲೆ ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಪಕ್ಕದ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ಬಾವಿಯಿಂದ ಮೇಲೆತ್ತಿದ್ದಾರೆ.

Facebook Comments

comments