DAKSHINA KANNADA
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿ ವೇಳೆ ಅವಘಡ – ತೆಂಗಿನಮರ ಮುರಿದು ಬಿದ್ದು ದೇವಸ್ಥಾನದ ಕಾರ್ಮಿಕನಿಗೆ ಗಂಭೀರ ಗಾಯ

ಪುತ್ತೂರು ಫೆಬ್ರವರಿ 17: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ ನಡೆಯುತ್ತಿರುವ ಕಾಮಗಾರಿ ವೇಳೆ ತೆಂಗಿನ ಮರ ಬಿದ್ದು ಕಾರ್ಮಿಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ದೇವಳದ ಪುಷ್ಕರಣಿ ಸಮೀಪ ನಡೆದಿದೆ.
ದೇವಳದ ನಿತ್ಯ ಕಾರ್ಮಿಕ ರವಿ(35) ಗಂಭೀರ ಗಾಯಗೊಂಡ ವ್ಯಕ್ತಿ. ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲಿ ಅಭಿವೃದ್ದಿ ಕಾರ್ಯ ನಡೆಯುತ್ತಿದೆ. ಈ ಕೆಲಸಗಳಿಗೆ ದೇವಳದ ನಿತ್ಯ ಸಿಬ್ಬಂದಿಯನ್ನ ಅನಧಿಕೃತವಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಇಂದು ಮರ ಕಡಿಯಲು ದೇವಸ್ಥಾನದ ಸಿಬ್ಬಂದಿಗಳನ್ನು ಬಳಸಿಕೊಂಡಿದ್ದಾರೆ. ಈ ವೇಳೆ ಈ ಅಪಘಢ ಸಂಭವಿದೆ. ಕಳೆದ ಕಳೆದ ಕೆಲ ದಿನಗಳಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ದೇವಳದ ನಿತ್ಯ ಸಿಬ್ಬಂದಿಗಳನ್ನ ಇತರೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
