ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ. 

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ.

 

ಮಾಡಾವು ಕಟ್ಟತ್ತಾರು ನಿವಾಸಿ ಹಂಝರ ಪುತ್ರ ತಸ್ಲೀಮ್ (17) ಸುಳ್ಯದ ಅರಂತೋಡಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ ಎನ್ನಲಾಗಿದೆ.

ಅ. 15ರಂದು ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ತಸ್ಲೀಮ್ ನಾಪತ್ತೆಯಾಗಿದ್ದ.

ತಸ್ಲೀಮ್ ನಾಪತ್ತೆಯಾಗುತ್ತಿದ್ದಂತೆ ಉಳಿದ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು.

ತಕ್ಷಣ ಸ್ಥಳೀಯರು, ಮುಳುಗು ತಜ್ಞರು ಬಂದು ಹುಡುಕಾಟ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.

ಸೋಮವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಸನಿಹವೇ ತಸ್ಲೀಮ್  ಮೃತದೇಹ ಪತ್ತೆಯಾಗಿದೆ.

Share Information