DAKSHINA KANNADA
ಪುತ್ತೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಪ್ರತಿಭಟನೆ
ಪುತ್ತೂರು, ಡಿಸೆಂಬರ್ 20:ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
ಬಿಜೆಪಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು, ಪ್ರತಿಭಟನಾಕಾರರನ್ನು ಉದ್ಧೇಶಿಸಿ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರು
ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದಲ್ಲಿ ಗೂಂಡಾಗಿರಿ ಸರಕಾರ ನಡೆಸುತ್ತಿದ್ದಾರೆ. ಬೆಳಗಾವಿ ಸುವರ್ಣ ಸೌಧದ ಒಳಗೇ ಸಚಿವರ ಗೂಂಡಾಗಳು ಸಿ.ಟಿ.ರವಿ ಮೇಲೆ ಹಲ್ಲೆ ನಡೆಸಿದ್ದಾರೆ. ಪಾರ್ಲಿಮೆಂಟ್ ನಲ್ಲಿ ರಾಹುಲ್ ಗಾಂಧಿ ಬಿಜೆಪಿಯ ಹಿರಿಯ ಸಂಸದರ ಮೇಲೆ ಹಲ್ಲೆ ನಡೆಸುತ್ತಾರೆ.
ಕಾಂಗ್ರೆಸ್ ಗೂಂಡಾ ಸಂಸ್ಕೃತಿಯ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಸಂಜೀವ ಮಠಂದೂರು ಎಚ್ಚರಿಕೆ ನೀಡಿದ್ದಾರೆ.