Connect with us

    DAKSHINA KANNADA

    ಪುತ್ತೂರು : ಚಾಕುವಿನಿಂದ ಇರಿತಕ್ಕೊಳಗಾದ ಯುವತಿ ಮೃತ್ಯು: ಆರೋಪಿ ಪದ್ಮರಾಜ್ ಬಂಧನ..!

    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನಿಂದ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾರೆ.

    ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನಿಂದ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾರೆ.

    ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ಧಾರೆನ್ನಲಾಗಿದೆ.

    ಇರಿತಕ್ಕೆ ಒಳಗಾಗಿರುವ ಯುವತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಭಾಗದ ಅಳಿಕೆ ನಿವಾಸಿ ಗೌರಿ(18) ಎಂದು ಗುರುತಿಸಲಾಗಿದೆ. ಯುವತಿಯನ್ನು ಇರಿದು ಸಾಯಿಸಿದ ಆರೋಪಿ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಪದ್ಮರಾಜ್ ಗುರುವಾರ ಮಧ್ಯಾಹ್ನ ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಬಳಿಕ ಪರಾರಿಯಾಗಿದ್ದ.

    Share Information
    Advertisement
    Click to comment

    You must be logged in to post a comment Login

    Leave a Reply