Connect with us

    LATEST NEWS

    ಬೈಂದೂರಿನಲ್ಲಿ ಸೆರೆಸಿಕ್ಕ ಬರೋಬ್ಬರಿ 20 ಅಡಿ ಉದ್ದದ ಹೆಬ್ಬಾವು

    ಕುಂದಾಪುರ ಸೆಪ್ಟೆಂಬರ್ 30 : ಉಡುಪಿ ಜಿಲ್ಲೆಯ ಬೈಂದೂರಿನ ಗೋಳಿಹೊಳೆ ಎಂಬಲ್ಲಿ ರವಿ ಶೆಟ್ಟಿ ಎಂಬವರ ಮನೆಯ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಗಿದೆ.


    ಕರ್ನಾಟಕ ಕಾರ್ಮಿಕ ವೇದಿಕೆಯ ರಾಜ್ಯಾಧ್ಯಕ್ಷ ಕಾರ್ಮಿಕ ಮುಖಂಡ ಡಾ.ರವಿ ಶೆಟ್ಟಿ ಬೈಂದೂರು ಅವರ ಮನೆಯ ಅಡಿಕೆ ತೋಟದಲ್ಲಿ ಅವರು ಸಾಕಿದ ನಾಯಿಯನ್ನು ಹಿಡಿದು ನುಂಗುತ್ತಿದ್ದ ಸಂದರ್ಭದಲ್ಲಿ ರವಿ ಶೆಟ್ಟಿಯವರು ಹಾವಿನ ಬಾಯಿಂದ ನಾಯಿಯನ್ನು ಬಿಡಿಸಿದ್ದಲ್ಲದೆ ಸುಮಾರು 20 ಅಡಿ ಉದ್ದ 50ಕೆಜಿಯಷ್ಟು ಭಾರ ಇರುವ ಹಾವನ್ನು ಹಾವಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಹಿಡಿದು ಗೋಳಿಹೊಳೆ ವಿಭಾಗಿಯ ಪ್ರಭಾರ ಅರಣ್ಯ ರಕ್ಷಕ ರಾಜೀವ ಎಸ್ ಗೌಡರ ಸಹಾಯದೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬಿಡಲಾಯಿತು.


    ದೊಡ್ಡಗಾತ್ರದ ಹಾವನ್ನು ಒಬ್ಬರಿಂದ ಎತ್ತಿ ಹಿಡಿಯುವುದು ಆಗದಿದ್ದಾಗ ಅರಣ್ಯ ಇಲಾಖೆಯವರಿಗೆ ತಿಳಿಸಿದ ತಕ್ಷಣ ಸಮೀಪದಲ್ಲೇ ಇದ್ದ ಅರಣ್ಯ ರಕ್ಷಕರಾದ ರಾಜೀವ್ ಎಸ್ ಗೌಡರು ಮತ್ತು ಸಹಾಯಕರಾದ ನಾರಾಯಣ ಗೌಡರು ಆಗಮಿಸಿ ಸಹಕರಿಸಿದರು.

    Video:

    Share Information
    Advertisement
    Click to comment

    You must be logged in to post a comment Login

    Leave a Reply