Connect with us

    DAKSHINA KANNADA

    ಶಂಕಿತ ರೇಬಿಸ್ ವೈರಸ್ ಗೆ ವಿಧ್ಯಾರ್ಥಿನಿ ಬಲಿ

    ಕಡಬ : ಶಂಕಿತ ರೇಬಿಸ್ ವೈರಸ್ ಸೊಂಕು ತಗುಲಿ ವಿಧ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನಪ್ಪಿರುವ ಘಟನೆ ಕಡಬದಲ್ಲಿ ನಡೆದಿದೆ.


    ಮೃತ ವಿಧ್ಯಾರ್ಥಿನಿಯನ್ನು ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ ಪುತ್ರಿ ವಿನ್ಸಿ ಸಾರಮ್ಮ(17) ಎಂದು ಗುರುತಿಸಲಾಗಿದ್ದು, ಇವರು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದರು.
    ವಿನ್ನಿಗೆ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ತೀವ್ರ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಸಂಜೆ ವೇಳೆ ತಲೆನೋವು ಉಲ್ಬಣಗೊಂಡಿದ್ದರಿಂದ ಪುತ್ತೂರು ಖಾಸಗಿ ಆಸ್ಪತ್ರೆಗೆ ಸೇರಿಸಿ ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡ ರಾತ್ರಿ ವಿನ್ನಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

    ಸುಮಾರು 4 ತಿಂಗಳ ಹಿಂದೆ ಆಲಂಕಾರು ಪೇಟೆ ಸೇರಿದಂತೆ ಮೃತಳ ಮನೆಯ ಸುತ್ತಮುತ್ತ ಹುಚ್ಚು ನಾಯಿಯೊಂದು ಕಾಣಿಸಿಕೊಂಡಿದ್ದು, ಈ ವೇಳೆ ಅಲಂಕಾರು ಪೇಟೆಯಲ್ಲಿರುವ ಬೀದಿನಾಯಿ ಸೇರಿದಂತೆ ಇಬ್ಬರ ಮೇಲೆಯೂ ದಾಳಿ ನಡೆಸಿತ್ತು. ಮೃತಳ ಮನೆಯ ನಾಯಿಯು ಕೆಲವು ದಿನಗಳ ಹಿಂದೆ ರೇಬಿಸ್‌ಗೆ ಒಳಗಾಗಿ ಸಾವನ್ನಪ್ಪಿತ್ತು. ಮನೆ ನಾಯಿಯಿಂದ ವೈರಸ್ ವಿದ್ಯಾರ್ಥಿನಿಗೂ ತಗಲಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಪರೀಕ್ಷೆ ನಡೆಸುತ್ತಿರುವುದಾಗಿ ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply