Connect with us

  FILM

  ನೇಹಾ ಹಿರೇಮಠ್ ಕೊಲೆಗಾರನ ಜನ ಸಾಮಾನ್ಯರ ಕೈಗೆ ಒಪ್ಪಿಸಿ – ನಟಿ ರಚಿತಾ ರಾಮ್

  ಬೆಂಗಳೂರು ಎಪ್ರಿಲ್ 20 : ವಿಧ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಆರೋಪಿಗೆ ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ನಟಿ ರಚಿತಾ ರಾಮ್ ಒತ್ತಾಯಿಸಿದ್ದಾರೆ. ಪ್ರಕರಣ ಕುರಿತು ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಹಾಕಿರುವ ರಚಿತಾ ರಾಮ್‌, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.


  ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್‌ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರಕ್ಕೆ ನನ್ನ ಒಂದು ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply