ಧರ್ಮಸ್ಥಳದಲ್ಲಿ ಶಿವರಾತ್ರಿ ಆಚರಿಸಿದ ಡಿಂಪಲ್ ಕ್ವೀನ್ ರಚಿತಾ ರಾಮ್

ಮಂಗಳೂರು ಮಾರ್ಚ್ 4: ದೇಶದೆಲ್ಲಡೆ ಶಿವರಾತ್ರಿಯ ಸಂಭ್ರಮ ಮುಗಿಲು ಮುಟ್ಟಿದೆ. ರಾಜ್ಯದ ಎಲ್ಲಾ ಶಿವನ ದೇವಸ್ಥಾನಗಳಲ್ಲಿ ಶಿವರಾತ್ರಿ ಹಬ್ಬದ ಸಂಭ್ರಮದ ಮುಗಿಲು ಮುಟ್ಟಿದೆ. ಎಲ್ಲಾ ಶಿವ ಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆ ತುಂಬಿ ತುಳುಕುತ್ತಿದೆ. ರಾಜ್ಯದ ಹೆಸರಾಂತ ಶಿವಕ್ಷೇತ್ರವಾದ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದಲ್ಲಿ ಇಂದು ಮುಂಜಾನೆಯಿಂದಲೇ ಭಕ್ತರ ಸಾಲು ಹೆಚ್ಚಾಗಿದೆ.

ಕಾಮನ್ ಆಗಿ ಸೆಲೆಬ್ರಿಟಿಗಳು ಕೂಡ ಹಬ್ಬದ ದಿನದಂದು ಕ್ಷೇತ್ರದರ್ಶನ ಮಾಡುತ್ತಿರುತ್ತಾರೆ. ಅದೇ ರೀತಿ ಇದೀಗ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್, ಇಂದು ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿದ್ದಾರೆ.

ಶಿವರಾತ್ರಿಯ ಶುಭ ಮುಂಜಾನೆ, ಸಿನಿಮಾ ಕೆಲಸಗಳಿಂದ ಕೊಂಚ ಬಿಡುವು ಮಾಡಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದ ಬುಲ್ ಬುಲ್ ಬೆಡಗಿ ರಚಿತಾ ರಾಮ್, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿರುವ ಖುಷಿಯನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

Facebook Comments

comments