LATEST NEWS
ಉಡುಪಿ ವಿಧಾನಸಭಾ ಕ್ಷೇತ್ರ ಪ್ರಮೋದ್ ಮಧ್ವರಾಜ್ ವಿರುದ್ದ ರಘುಪತಿ ಭಟ್

ಉಡುಪಿ ವಿಧಾನಸಭಾ ಕ್ಷೇತ್ರ ಪ್ರಮೋದ್ ಮಧ್ವರಾಜ್ ವಿರುದ್ದ ರಘುಪತಿ ಭಟ್
ಉಡುಪಿ ಎಪ್ರಿಲ್ 20: ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಪ್ರಮೋಧ್ ಮಧ್ವರಾಜ್ ಎದುರು ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಚುನಾವಣೆಗೆ ನಿಲ್ಲಿಸಿದೆ. ಬಹಳ ಕುತೂಹಲ ಮೂಡಿಸಿದ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಪಡೆಯಲು ರಘುಪತಿ ಸಫಲರಾಗಿದ್ದಾರೆ.
ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ, ಇದರಲ್ಲಿ ಉಡುಪಿಯ 2 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಲಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ರಘುಪತಿ ಭಟ್ ಆಯ್ಕೆಯಾಗಿದ್ದು, ಕಾಪು ವಿಧಾನಸಭಾ ಕ್ಷೇತ್ರದಿಂದ ಲಾಲಾಜಿ ಮೆಂಡನ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ.
