Connect with us

    LATEST NEWS

    ನರ್ಸಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ – 9 ಮಂದಿ ಅರೆಸ್ಟ್

    ಮಂಗಳೂರು : ಮಂಗಳೂರಿನ ಪ್ರಮುಖ ನರ್ಸಿಂಗ್ ಕಾಲೇಜಿನಲ್ಲಿ ಇಬ್ಬರು ವಿಧ್ಯಾರ್ಥಿಗಳ ಮೇಲೆ ರ್‍ಯಾಗಿಂಗ್ ಮಾಡಿದ 9 ಮಂದಿ ವಿಧ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.


    ಬಂಧಿತರನ್ನು ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಎಂದು ಗುರುತಿಸಲಾಗಿದ್ದು, ಬಂಧಿತರಲ್ಲಿ 7 ಮಂದಿ ಬೇರೊಂದು ಕಾಲೇಜಿನ ವಿದ್ಯಾರ್ಥಿಗಳು , ಓರ್ವ ಸಂತ್ರಸ್ತ ವಿದ್ಯಾರ್ಥಿಗಳ ಸೀನಿಯರ್ ಹಾಗೂ ಮತ್ತೋರ್ವ ಬಂಧಿಸಲ್ಪಟ್ಟವರು.

    ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ ಅಮಲ್ ಗಿರೀಶ್ ಅವರು ಸ್ನೇಹಿತ ಕಾರ್ತಿಕ್ ವಿಜಯನ್ ಜತೆ ಅಪಾರ್ಟ್‌ಮೆಂಟ್ ಗೆ ತೆರಳುತ್ತಿದ್ದ ಸಂದರ್ಭ ಆರೋಪಿಗಳು ಇಬ್ಬರನ್ನು ಅವರ ರೂಮಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಹಾಡಿಸಿದ್ದಾರೆ. ಗಡ್ಡವನ್ನು ಬೋಳಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. 270 ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೆಲ್ಮೆಟ್ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಅಮಲ್ ಗಿರೀಶ್ ಪೊಲೀಸರಿಗೆ ದೂರು ನೀಡಿದ್ದರು. ಪಾಂಡೇಶ್ವರ ಠಾಣಾ ಇನ್ಸ್ಪೆಕ್ಟರ್ ಲೋಕೇಶ್ ಎ.ಸಿ. ಹಾಗು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್ಐ ಶೀತಲ್ ಅಲಗೂರ್ ಅವರು ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply