FILM
ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್
ಬೆಂಗಳೂರು ಜನವರಿ 14: ಡ್ರಗ್ಸ್ ಪ್ರಕರಣದಲ್ಲಿ ಸಿಕಿಹಾಕಿಕೊಂಡು ಜೈಲು ವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರೊಂದಿಗೆ ನಟಿ ರಾಗಿಣಿ ದ್ವಿವೇದಿ ಅವರ ಮೇಲಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ.
2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು. ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು. ಇಬ್ಬರೂ ನಟಿಯರು ಪರಪ್ಪನ ಅಗ್ರಹಾರದಲ್ಲಿ ಕೆಲವು ದಿನ ಕಳೆದಿದ್ದರು.
ಇದಾದ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೂ ಈ ಪ್ರಕರಣ ರಾಗಿಣಿ ವೃತ್ತಿ ಜೀವನಕ್ಕೂ ಸಾಕಷ್ಟು ಹೊಡೆತ ನೀಡಿತ್ತು. ಇದೀಗ ನಟಿಯ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಸಿಗದ ಹಿನ್ನಲೆಯಲ್ಲಿ ನಿರಪರಾಧಿ ಎಂದು ಹೈಕೋರ್ಟ್ ಖುಲಾಸೆಗೊಳಿಸಿದೆ.
ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಎನ್ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎನ್ನಲಾಗಿದೆ.